Home ರಾಜ್ಯ ಸುದ್ದಿನಟ ಸುದೀಪ್ ತಾಯಿ ನಿಧನಕ್ಕೆ ಮೋದಿ ಸಂತಾಪ

ನಟ ಸುದೀಪ್ ತಾಯಿ ನಿಧನಕ್ಕೆ ಮೋದಿ ಸಂತಾಪ

by Kundapur Xpress

ಬೆಂಗಳೂರು : ನಟ ಸುದೀಪ್ ತಾಯಿ ಸರೋಜಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೋದಿ ಬರೆದಿರುವ ಪತ್ರವನ್ನು ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಧನ್ಯವಾದ ಅರ್ಪಿಸಿದ್ದಾರೆ. ಅ.20ರಂದು ಮುಂಜಾನೆ ಸರೋಜಾ ಮೃತಪಟ್ಟಿದ್ದರು. ಮೋದಿ ತಮ್ಮ ಪತ್ರದಲ್ಲಿ, ನಿಮ್ಮ ತಾಯಿ ಸರೋಜಾ ಸಂಜೀವ್ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ನೋವಾಗಿದೆ. ತಾಯಿಯ ಅಗಲಿಕೆಯಿಂದ ಆದ ನಷ್ಟವನ್ನು ತುಂಬಲು ಸಾಧ್ಯವಿಲ್ಲ ಅವರ ಜೊತೆ ನಿಮಗೆ ಇದ್ದ ಬಾಂಧವ್ಯ ಹಾಗೂ ಅವರ ಪರಿಣಾಮ ನಿಮ್ಮ ಮೇಲೆ ಎಷ್ಟಿತ್ತು ಎಂಬುದನ್ನು ನಿಮ್ಮ ದುಃಖವೇ ಹೇಳುತ್ತಿದೆ. ನೆನಪುಗಳ ಮೂಲಕ ಅವರು ಶಾಶ್ವತವಾಗಿ ಇರಲಿದ್ದಾರೆ. ನೋವನ್ನು ಭರಿಸುವ ಶಕ್ತಿ ನಿಮಗೆ ಸಿಗಲಿ. ಓಂ ಶಾಂತಿ ಎಂದು ಸಾಂತ್ವಾನ ಹೇಳಿದ್ದಾರೆ. ಸದ್ಯ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related Articles