ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣ ವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಹಾಗೂ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಶುಕ್ರವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಶಾಸಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಸುಮಾರು 10 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.