ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿರುವ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಶುಕ್ರವಾರ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದಾರೆ
ಮೈಸೂರಿನ ಕೆಸರೆಯ ಸರ್ವೇ ನಂ. 462 ಹಾಗೂ 464 ಜಮೀನಿನ ಬದಲಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ನವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋಟ್ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾ ಗೊಳಿಸಿರುವ ಹೈಕೋರ್ಟ್, ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ವ್ಯಾಪ್ತಿಯಲ್ಲಿ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿತ್ತು
4 ಆರೋಪಿಗಳು
ಸಿಎಂ ಸಿದ್ದರಾಮಯ್ಯ ಆರೋಪಿ ಎ.1, ಸಿಎಂ ಪತ್ನಿ ಬಿ.ಎನ್. ಪಾರ್ವತಿ ಎ.2, ಸಿಎಂ ಸಿದ್ದರಾಮಯ್ಯರ ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ ಎ.3, ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು ಎ.4 ಆರೋಪಿಯಾಗಿದ್ದಾರೆ. ಲೋಕಾಯುಕ್ತ ಎಸ್ಪಿ ಉದೇಶ ಅವರಿಂದ ಎಫ್‌ಐಆರ್ ದಾಖಲಿಸಲಾಗಿದೆ.