ಬೆಂಗಳೂರು : ರಾಜಕೀಯ ಸಹಾನುಭೂತಿ ಪಡೆಯಲು, ಅಧಿಕಾರಕ್ಕಾಗಿ ತೊಡೆ ತಟ್ಟುವ ಸ್ವಪಕ್ಷೀಯರನ್ನು ಸುಮ್ಮನಾಗಿಸಲು ಸಿದ್ದರಾಮಯ್ಯ ಸೈಟ್ ಹಿಂತಿರುಗಿಸುವ ಈ ರಾಜಕೀಯ ನಾಟಕ ಮಾಡುತ್ತಿದ್ದಾರೆ. ಅವರು ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ಲೇಷಿಸಿದರು.
ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ಸೋಮವಾರ ಇ.ಡಿ. ಪ್ರಕರಣ ದಾಖಲಾಗಿದೆ. ರಾಜ್ಯಪಾಲರು ದಿಲ್ಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯ ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ ನಿವೇಶನ ವಾಪಸ್ ನೀಡುತ್ತಿದ್ದಾರೆ ಎಂದ ಅವರು ಸಿದ್ದರಾಮಯ್ಯ ತಪ್ಪು ಮಾಡಿದ್ದನ್ನು ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ ಎಂದು ತಿಳಿಸಿದರು