ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬುಧವಾರ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ. ಲೋಕಾಯುಕ್ತ ಕಚೇರಿಗೆ ಬೆಳಗ್ಗೆ ತೆರಳಲಿರುವ ಸಿದ್ದರಾಮಯ್ಯ ಖುದ್ದು ವಿಚಾರಣೆಗೆ ಹಾಜರಾಗಲಿದ್ದಾರೆ. ತಮ್ಮ ನಾಲ್ಕೂವರೆ ದಶಕಗಳ ಸುದೀರ್ಘ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸುತ್ತಿರುವುದು ಇದೇ ಪ್ರಥಮ ಅಧಿಕಾರದಲ್ಲಿರುವ ಮುಖ್ಯಮಂತ್ರಿಯೊಬ್ಬರು ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತಿರುವುದು ರಾಜ್ಯದಲ್ಲಿ ಇದೇ ಮೊದಲು ಆಗಿದೆ.
ವಿಚಾರಣೆಗೆ ಹಾಜರಾಗಬೇಕಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆ ಪ್ರಚಾರ ಸಂಬಂಧ ಈ ಹಿಂದೆ ಬಿಡುಗಡೆಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬುಧವಾರದ ಪ್ರವಾಸ ಪಟ್ಟಿ ಪರಿಷ್ಕೃತಗೊಂಡಿದೆ