ಬೆಂಗಳೂರು : ಮುಡಾ ಪ್ರಕರಣದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ಕುರಿತ ಅಂತಿಮ ಹಂತದ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ನಡೆಸಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠವು ಸೋಮವಾರ ಮಧ್ಯಾಹ್ನ 2.30ಕ್ಕೆ ಕೈಗೆತ್ತಿಕೊಳ್ಳಲಿದೆ. ಈಗಾಗಲೇ ಅರ್ಜಿದಾರರಾಗಿರುವ ಮುಖ್ಯಮಂತ್ರಿಗಳ ಪರ ವಕೀಲರು ಮತ್ತು ಪ್ರತಿವಾದಿಗಳಾಗಿರುವ ರಾಜ್ಯಪಾಲರ ಕಚೇರಿ, ಮೂವರು ಖಾಸಗಿ ದೂರುದಾರರ ಪರ ವಕೀಲರ ವಾದ-ಪ್ರತಿವಾದವು ಭಾಗಶಃ ಪೂರ್ಣಗೊಂಡಿದೆ. ಅಂತಿಮ ಹಂತದ ವಿಚಾರಣೆ ಮಾತ್ರ ಬಾಕಿ ಉಳಿದಿದ್ದು ಸೋಮವಾರವೇ ಅರ್ಜಿ ವಿಚಾರಣೆ ಪೂರ್ಣಗೊಳ್ಳಬಹುದು. ಅದರಂತೆ ಒಂದೊಮ್ಮೆ ಅರ್ಜಿ ಕುರಿತ ಎಲ್ಲ ಪಕ್ಷಕಾರರ ವಾದ- ಪ್ರತಿವಾದ ಪೂರ್ಣಗೊಂಡರೇ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸುವ ಸಾಧ್ಯತೆ ಇದೆ.
ಈ ಪ್ರಕರಣದಲ್ಲಿ ಸಿಎಂ ಪರ ಸುಪ್ರಿಂ . ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಫ್ಟಿ ವಾದ ಮಂಡಿಸಿದ್ದಾರೆ.