ಬೆಂಗಳೂರು: ಮೈಸೂರು ಮುಡಾ ಭೂಹಗರಣ ಪ್ರಕರಣದಲ್ಲಿ ತಮ್ಮ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಇಂದು ಸೋಮವಾರ ವಿಚಾರಣೆ ನಡೆಸಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ಜಮೀನು ಪಡೆದಿದ್ದಾರೆ ಎಂಬ ಆರೋಪವಿದ್ದ ಹಿನ್ನೆಲೆ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅವರು ಪ್ರಾಸಿಕ್ಯೂಷನ್‌ಗೆ ತಡಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಸೆ.2ರಂದು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತ್ತು. ಸೋಮವಾರ ಮುಡಾ ಪ್ರಕರಣದ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ನಡೆಯಲಿದೆ. ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಸೆ.12ರಂದು ಸಿಎಂ ಪರ ವಕೀಲ ಅಭಿಷೇಕ್ ಮನುಸಿಂಫ್ಟಿ. ವಾದ ಮಂಡಿಸಲಿದ್ದಾರೆ. ಅದೇ ದಿನ ನ್ಯಾಯಪೀಠವು ಬಹುತೇಕ ಅರ್ಜಿ ವಿಚಾರಣೆ ಪೂರ್ಣಗೊಳಿಸಲಿದೆ.