Home ರಾಜ್ಯ ಸುದ್ದಿಸಿದ್ದರಾಮಯ್ಯಗೆ ಮತ್ತೊಂದು ಕಂಟಕ

ಸಿದ್ದರಾಮಯ್ಯಗೆ ಮತ್ತೊಂದು ಕಂಟಕ

by Kundapur Xpress

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ನಿಯಮ ಮೀರಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ಪ್ರಕರಣದ ವಿವರಣೆ ನೀಡುವಂತೆ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಮುಡಾದಿಂದ ಕೈಗೊಳ್ಳಲಾದ 387 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿ ಸಿಎಂ ವಿರುದ್ಧ ಮೈಸೂರು ಮೂಲದ ಪಿ. ಎಸ್. ನಟರಾಜ್ ಎಂಬುವವರು ರಾಜ್ಯಪಾಲ ಥಾವರಚಂದ್ ಗೆಹಲೋತ್‌ರಿಗೆ ದೂರು ನೀಡಿದ್ದಾರೆ. ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಸಿಎಂ ಮತ್ತು ರಾಜ್ಯಪಾಲರ ನಡುವಿನ ತಿಕ್ಕಾಟ ನಡೆಯುತ್ತಿರುವ ಮಧೈಯೇ ಸಿದ್ದರಾಮಯ್ಯ ಅವರಿಗೆ ಮತ್ತೊಂದು ತಲೆನೋವು ಎದುರಾಗುವಂತಾಗಿದೆ.

Related Articles