ಬೆಂಗಳೂರು : ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೂ ಮುನ್ನ ರಾಜರಾಜೇಶ್ವರಿ ನಗರದಲ್ಲಿರುವ ಸ್ಟೋನಿ ಬ್ರೂಕ್ ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ನಟ ದರ್ಶನ್ ಹಾಗೂ ಸಹಚರರು ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಮಾಹಿತಿ ದೊರೆತಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಆ ಪಾರ್ಟಿ ವೇಳೆ ಹಾಸ್ಯ ನಟ ಚಿಕ್ಕಣ್ಣ ಕೂಡ ಇದ್ದರೆಂಬ ಮಾಹಿತಿ ಹಿನ್ನೆಲೆ ಅವರನ್ನೂ ಕರೆತಂದು ಕೆಲವು ಗಂಟೆಗಳ ಕಾಲ ಸ್ಥಳ ಮಹಜರು ಪ್ರಕ್ರಿಯೆ ಕೈಗೊಳ್ಳಲಾಯಿತು
ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ನಟ ದರ್ಶನ್ ಸೇರಿ ರೆಸ್ಟೋರೆಂಟ್ ಮಾಲೀಕ ವಿನಯ್, ಪ್ರದೂಶ್, ಪವನ್ ಸೇರಿದಂತೆ ಇತರೆ ಆರೋಪಿಗಳನ್ನು ಎಸಿಪಿ ಭರತ್ ರೆಡ್ಡಿ ನೇತೃತ್ವ ದಲ್ಲಿ ಸ್ಥಳ ಮಹಜರು ನಡೆಸಲಾಗಿದೆ. ನಟ ಚಿಕ್ಕಣ್ಣ ಪಾರ್ಟಿಯಲ್ಲಿ ಭಾಗಿಯಾಗಿರುವುದನ್ನು ತಿಳಿದ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ಚಿಕ್ಕಣ್ಣ ಅವರನ್ನೂ ಸ್ಟೋನಿ ಬ್ರೂಕ್ ಪಬ್ಗೆ ಕರೆದೊಯ್ದು ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿ ಕೆಲ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಕೊಲೆ ನಿಮಗೆ ಮೊದಲೇ ತಿಳಿದಿತ್ತೆ? ಪಾರ್ಟಿಯಲ್ಲಿ ಏನೆಲ್ಲ ಘಟನೆ ನಡೆದಿತ್ತು? ಎಂದು ಪ್ರಶ್ನಿಸಿದ್ದಾರೆ