ಬೆಂಗಳೂರು : ಪವಿತ್ರಾ ಗೌಡಳಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಪಟ್ಟಣಗೆರೆ ಯಾರ್ಡ್ ನಲ್ಲಿ ರೇಣುಕಾ ಸ್ವಾಮಿಗೆ ಕಾಲಿನಿಂದ ಒದ್ದು, ಕೈಯಿಂದ ಗುದ್ದಿ ಮನೆಗೆ ಮರಳಿದೆ ಕೆಲ ಹೊತ್ತಿನ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂಬುದು ಗೊತ್ತಾಯಿತು ನಾನು ಯಾರ್ಡ್ನಿಂದ ಬರುವಾಗ ಆತ ಚೆನ್ನಾಗಿಯೇ ಇದ್ದ’ ಎಂದು ನಟ ದರ್ಶನ್ ತಪ್ರೊಪ್ಪಿಗೆ ಹೇಳಿಕೆ ನೀಡಿದ್ದಾರೆ.
ಅಲ್ಲದೆ ಪರಿಸ್ಥಿತಿ ನಿಭಾಯಿಸಲು ಪ್ರದೂಷ್ ಕೇಳಿದ್ದಕ್ಕೆ 30 ಲಕ್ಷ ರು. ಹಣ ಹಾಗೂ ವಿನಯ್ ಗೆ 10 ಲಕ್ಷ ರು. ಹಣವನ್ನು ಮನೆಯಿಂದಲೇ ಕೊಟ್ಟಿದ್ದೇನೆ. ಈ ಹಣ ನನಗೆ ನಿರ್ಮಾಪಕರು ಕೊಟ್ಟಿದ್ದರು ಎಂದು ದರ್ಶನ್ ತಿಳಿಸಿದ್ದಾರೆ.
“ನಿನಗೆ ಬರುವ 20 ಸಾವಿರ ರು. ಸಂಬಳದಲ್ಲಿ ಇವಳನ್ನು (ಪವಿತ್ರಾಗೌಡ) ಮೆಂಟೇನ್ ಮಾಡಲು ಸಾಧ್ಯನಾ? ಇದೆಲ್ಲ ನಿನಗೆ ಬೇಕಾ? ಇತರೆ ನಟಿಯರಿಗೂ ಮೆಸೇಜ್ ಮಾಡಿದ್ದೀಯಲ್ಲಎಂದು ಬೈದು ಚಿತ್ರದುರ್ಗದ ರೇಣುಕಾ ಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾಗಿಯೂ ತಪ್ರೊಪ್ಪಿಗೆ ಹೇಳಿಕೆ ನೀಡಿದ್ದಾರೆ.
ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿ ದರ್ಶನ್ರವರ 8 ಪುಟಗಳ ತಪೊಪ್ಪಿಗೆ ಹೇಳಿಕೆ ದಾಖಲಾಗಿದ್ದು ಈ ಹೇಳಿಕೆ ಸೋಮವಾರ ಬಹಿರಂಗವಾಗಿ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ನಾನು ಹಲ್ಲೆ ನಡೆಸಿ ಶೆಡ್ನಿಂದ ತೆರಳಿದೆ ಮರುದಿನ ಮೈಸೂರಿಗೆ ಹೋದ ಮೇಲೆ ರೇಣುಕಾಸ್ವಾಮಿಗೆ ಪವನ್, ಧನರಾಜ್ ಹಾಗೂ ನಂದೀಶ ಕರೆಂಟ್ ಶಾಕ್ ಕೊಟ್ಟಿದ್ದಲ್ಲದೆ ನೆಲಕ್ಕೆ ಕುಕ್ಕಿ ಹಲ್ಲೆ ಮಾಡಿದ ಸಂಗತಿ ಗೊತ್ತಾಯಿತು ಎಂದೂ ಅವರು ಹೇಳಿದ್ದಾರೆ