ಬೆಂಗಳೂರು : ಮೊದಲ ಬಾರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯದಿಂದ ಸೋಮವಾರ ಜಾಮೀನು ಮಂಜೂರಾಗಿದೆ.
ಪ್ರಕರಣದಲ್ಲಿ 16ನೇ ಆರೋಪಿಯಾಗಿರುವ ಬೆಂಗ ಳೂರಿನ ಕೇಶವಮೂರ್ತಿಗೆ ಹೈಕೋರ್ಟ್, 15ನೇ ಆರೋಪಿ ಕಾರ್ತಿಕ್ ಅಲಿಯಾಸ್ ಕಪ್ಪೆ ಮತ್ತು 17ನೇ ಆರೋಪಿ ನಿಖಿಲ್ ನಾಯಕ್ಗೆ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಇದರೊಂದಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ 17 ಮಂದಿ ಆರೋಪಿಗಳ ಪೈಕಿ ಕೊನೆಯ ಮೂವರಿಗೆ ಜಾಮೀನು ದೊರೆತಂತಾಗಿದೆ. ಇನ್ನೂ ಜಾಮೀನು ಕೋರಿ ಮೊದಲ ಆರೋಪಿ ಪವಿತ್ರಾ ಗೌಡ ಮತ್ತು ಎರಡನೇ ಆರೋಪಿ ನಟ ದರ್ಶನ್ ಜಾಮೀನು ಅರ್ಜಿಗಳ ವಿಚಾರಣೆಯನ್ನು ಕ್ರಮವಾಗಿ ಸೆ.25 ಮತ್ತು ಸೆ.27ಕ್ಕೆ ಸಿಟಿ ಸಿವಿಲ್ ಮತ್ತು ಸೆಷನ್ ನ್ಸ್ ನ್ಯಾಯಾಲಯ ಮುಂದೂಡಿದೆ.