127
ಬೆಂಗಳೂರು : ಸರ್ಕಾರಿ ಕಾಮಗಾರಿಗಳ ಗುತ್ತಿಗೆ, ಖರೀದಿ ಪ್ರಕ್ರಿಯೆಗಳಲ್ಲಿ 2-ಬಿ ಪ್ರವರ್ಗದವರಿಗೆ (ಮುಸ್ಲಿಮರಿಗೆ) ಶೇ.4ರಷ್ಟು ಮೀಸಲಾತಿ ಕಲ್ಪಿಸುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ನಿಯಮಗಳ ತಿದ್ದುಪಡಿ ವಿಧೇಯಕವನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಬುಧವಾರ ಮತ್ತೊಮ್ಮೆ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ರಾಷ್ಟ್ರಪತಿ ಬಳಿ ಕಳಿಸಬೇಕೆಂದು ಹೇಳಿದ್ದಾರೆ.
ಅಲ್ಲದೆ, ಏ.15 ರಂದು ರಾಜ್ಯ ಸರ್ಕಾರಕ್ಕೆ ವಿಧೇಯಕ ವಾಪಸ್ ಕಳುಹಿಸಿ ನಾನು ತಿಳಿಸಿದ್ದ ಅಭಿಪ್ರಾಯಕ್ಕೆ ಬದ್ಧನಾಗಿದ್ದೇನೆ. ವಿಧೇಯಕವು ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಬೇಕು ಎಂದು ಪುನರುಚ್ಚರಿಸಿದ್ದಾರೆ

