112
ಬೆಂಗಳೂರು : ಮುಸ್ಲಿಂ ಸಮುದಾಯದವರಿಗೆ ಸರ್ಕಾರಿ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ನೀಡುವುದರ ವಿರುದ್ದ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿಂದುಗಳೇನು ಅಪರಾಧ ಮಾಡಿದ್ದಾರೆ ? ಹಿಂದುಗಳಲ್ಲಿ ಬಡವರಿಲ್ಲವೇ ಎಂದು ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಮಸೂದೆಯನ್ನು ಸದನದಲ್ಲಿ ತಂದಾಗ ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ ಇದಕ್ಕೆ ಅವಕಾಶ ಕೊಡಲ್ಲ ಎಂದರು

