Home » ವಸತಿ ಯೋಜನೆ : ಅಲ್ಪಸಂಖ್ಯಾತರ ಮೀಸಲು ಶೇ. 15ಕ್ಕೆ ಹೆಚ್ಚಳ
 

ವಸತಿ ಯೋಜನೆ : ಅಲ್ಪಸಂಖ್ಯಾತರ ಮೀಸಲು ಶೇ. 15ಕ್ಕೆ ಹೆಚ್ಚಳ

ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

by Kundapur Xpress
Spread the love

ಬೆಂಗಳೂರು : ಸರ್ಕಾರಿ ಯೋಜನೆಗಳ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡಿದ ರಾಜ್ಯ ಸರ್ಕಾರ, ಇದೀಗ ವಿವಿಧ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ 15ಕ್ಕೆ ಹೆಚ್ಚಿಸಲು ಮಹತ್ವದ ತೀರ್ಮಾನ ಕೈಗೊಂಡಿದೆ.

ವಿಧಾನಸಭೆಯಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಈ ಪ್ರಸ್ತಾಪ ಸಂಪುಟ ಸಭೆಯಲ್ಲಿಟ್ಟಿದ್ದರು.

ಸಂಪುಟ ಸಭೆಯ ನಂತರ ಕೈಗೊಂಡ ನಿರ್ಣಯಗಳ ಕುರಿತು ಮಾಧ್ಯಮದವರಿಗೆ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯು ಜಾರಿಗೆ ತರುತ್ತಿರುವ ವಿವಿಧ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿಯನ್ನು ಶೇ.10 ರಿಂದ 15ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು.

 

Related Articles

error: Content is protected !!