ಮಂಡ್ಯ : ಅಹಿಂದ ಹೆಸರೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅದೇ ಅಹಿಂದ ಸಮುದಾಯಕ್ಕೆ ಸೇರಿದ್ದ ಹಣವನ್ನು ಲೂಟಿ ಮಾಡಿದ ಆರೋಪವನ್ನು ತಾವೆ ಹೊತ್ತುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಪಟ್ಟಣದ ಪ್ರಮುಖ ವೃತ್ತದಲ್ಲಿ ಬಿಜೆಪಿ-ಜೆಡಿಎಸ್ ವತಿಯಿಂದ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ನಾಡಿನ ಜನರು ಕೇಳಿರುವ ವಾಲ್ಮೀಕಿ ನಿಗಮ ಮತ್ತು ಮೂಡಾ ಹಗರಣದಲ್ಲಿ ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಉತ್ತರ ಕೊಡಲು ಸಾಧ್ಯವಾಗದೆ ಅಧಿವೇಶನವನ್ನು ಮೊಟಕುಗೊಳಿಸಿ ಓಡಿಹೋದ ಯಾರಾದರೂ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ವಿರೋಧ ಪಕ್ಷದವರು ಮಂಡನೆ ಮಾಡಿರುವ ನಿಲುವಳಿ ಸೂಚನೆಗೆ ಉತ್ತರಕೊಡದೆ ಓಡಿಹೋದಂತೆ ಅಪಕೀರ್ತಿಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.