ಮೈಸೂರು : ಅರಮನೆಯ ಆಸ್ಥಾನ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಯದುವೀರ್ ರತ್ನಖಚಿತ ಸಿಂಹಾಸನಕ್ಕೆ ನಿಯಮದನ್ವಯ ಪೂಜೆ ಸಲ್ಲಿಸಿದರು. ದರ್ಬಾರ್ ಹಾಲ್‌ನಲ್ಲಿ ಆಯೋಜಿಸಿದ್ದ ನವಗ್ರಹ ಪೂಜೆ, ಸಿಂಹಾಸನದ ಮುಂದಿರಿಸಿದ್ದ ಸಿಂಹದ ಮುಖ ಮತ್ತು ಕಳಶಕ್ಕೆ ಆಕ್ಷತೆ, ಕುಂಕುಮ, ಅರಿಶಿಣ, ಹೂ ಹಾಕಿ ಗಂಧದ ಕಡ್ಡಿ ಹಾಗೂ ಮಂಗಳಾರತಿ ಬೆಳಗಿ ಪೂಜೆ ಸಲ್ಲಿಸಿದರು. ಸಿಂಹಾಸನಕ್ಕೆ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸಿಂಹಾಸನಾರೋಹಣ ಮಾಡಿದರು. ರಾಜಗಾಂಭೀರ್ಯದಿಂದ ರತ್ನಸಿಂಹಾಸನ ಏರಿ ಆಸ್ಥಾನಕ್ಕೆ ಬಲಗೈ ಎತ್ತಿ ಸೆಲ್ಯೂಟ್ ಮಾಡಿ
ರಾಜ ಗಾಂಭೀರ್ಯದಿಂದ ಕುಳಿತು ದರ್ಬಾರ್ ಆರಂಭಿಸಿದರು. ಕರ್ನಾಟಕ ಪೊಲೀಸ್ ಬ್ಯಾಂಡ್ ಸಿಬ್ಬಂದಿ ಶ್ರೀ ಗೌರಿ ಗೀತೆ ನುಡಿಸಿ ಗೌರವ ಸಲ್ಲಿಸಿದರು. ಶ್ರೀ ಮಹಾಗಣಪತಿಂ ಸರಸ್ವತಿ ಭಗವತಿಂ, ಸರಸ್ವತಿ, ಬ್ರಹ್ಮಮುರಾರಿ, ಐಗಿರಿ ನಂದಿನಿ, ವಿಜಯಾಂಬಿಕೆ, ಚಾಮುಂಡೇಶ್ವರಿ, ಭಾಗ್ಯದ ಲಕ್ಷ್ಮಿ ಬಾರಮ್ಮ ಹಾಡುಗಳನ್ನು ನುಡಿಸಿದರು. ಜಯಘೋಷಗಳು ಮೊಳಗಿದವು