Home » ಬಿಜೆಪಿ ನಾಯಕರಿಂದ ಜೆ ಪಿ ನಡ್ಡಾ ಭೇಟಿ
 

ಬಿಜೆಪಿ ನಾಯಕರಿಂದ ಜೆ ಪಿ ನಡ್ಡಾ ಭೇಟಿ

by Kundapur Xpress
Spread the love

 ಬೆಂಗಳೂರು : ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ರಾಜ್ಯ ಬಿಜೆಪಿಯ ಕೆಲ ನಾಯಕರು ಔಪಚಾರಿಕವಾಗಿ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದರು.

ಈ ವೇಳೆ ನಡ್ಡಾ ಅವರು ರಾಜ್ಯದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಆ‌ರ್. ಅಶೋಕ್, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಶಾಸಕರಾದ ಎನ್. ರವಿಕುಮಾರ್, ಮುನಿರತ್ನ ಸಂಸದ ತೇಜಸ್ವಿಸೂರ್ಯ ಮೊದಲಾದವರು ಭೇಟಿ ಮಾಡಿದ್ದರು. ಸರ್ಕಾರಿ ಕಾರ್ಯಕ್ರಮದ ಬಳಿಕ ನಡ್ಡಾ ಅವರು ದೆಹಲಿಗೆ ತೆರಳುವ ಮೊದಲು ಶುಕ್ರವಾರ ಸಂಜೆ ಕುಮಾರಕೃಪ ಅತಿಥಿ ಗೃಹಕ್ಕೆ ಆಗಮಿಸಿದರು. ಈ ವೇಳೆ ರಾಜ್ಯ ಬಿಜೆಪಿ ನಾಯಕರು ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿನಾರಾಯಣಸ್ವಾಮಿ, ನಡ್ಡಾ ಅವರು ಒಂದು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದರು. ನಾವು ಸಹಜವಾಗಿಯೇ ಮಾತುಕತೆ ನಡೆಸಿದ್ದೇವೆ ಎಂದರು

 

Related Articles

error: Content is protected !!