ಹುಬ್ಬಳ್ಳಿ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಗಲಭೆ ಪೂರ್ವ ಯೋಜಿತ. ಪಾಕಿಸ್ತಾನ ಮನಸ್ಥಿತಿಯ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ನಗರದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲೇ ರಾಷ್ಟ್ರದ್ರೋಹಿ ಚಟುವಟಿಕೆಗಳು ನಾಗಮಂಗಲದಲ್ಲಿ ನಡೆದಿದೆ. ಹಿಂದೂಗಳು ಸಾಮೂಹಿಕವಾಗಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮಸೀದಿ ಮುಂದೆ ಡೊಳ್ಳು ಬಾರಿಸಲಾಗಿದೆ ಎಂಬ ಕಾರಣಕ್ಕೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮಸೀದಿ ಎದುರಿಗೆ ಡೊಳ್ಳು ಬಾರಿಸಬಾರದೆಂಬ ನಿಯಮ ಏನಾದರೂ ಇದೆಯಾ? ಮಸೀದಿ ಎದುರಿಗೆ ಮೆರವಣಿಗೆ ನಡೆಸಬಾರದೆಂಬ ನಿಯಮವಿದೆಯಾ ಎಂದು ಪ್ರಶ್ನಿಸಿದರು. ವಿಸರ್ಜನಾ ಮೆರವಣಿಗೆ ಯಾವ ಮಾರ್ಗದಲ್ಲಿ ತೆರಳುತ್ತದೆ ಎಂಬುದು ಪೊಲೀಸ್ ಇಲಾಖೆಗೆ ಗೊತ್ತೇ ಇರುತ್ತದೆ. ಮತ್ತೇಕೆ ರಕ್ಷಣೆ ಕೊಡಲಿಲ್ಲ ಎಂದರು.