ಬೆಂಗಳೂರು : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಗೂ ಕೇರಳಕ್ಕೂ ನಂಟು ಇರುವ ಬಗ್ಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಕೋಮು ಗಲಭೆಯಲ್ಲಿ ಪಿಎಫ್ಐ, ಕೆಎಫ್ ಡಿಯಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ್ ಖರೀದಿಸಿದ್ದಾರೆ ಹಾರೂ ಸಿಸಿಟಿವಿ ಕ್ಯಾಮೆರಾಗಳನ್ನು ನಾಶ ಮಾಡಿದ್ದಾರೆ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ