Home » 6 ಮಂದಿ ನಕ್ಸಲರು ಶರಣು
 

6 ಮಂದಿ ನಕ್ಸಲರು ಶರಣು

by Kundapur Xpress
Spread the love

ಬೆಂಗಳೂರು : ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸತತ ಎರಡು ದಶಕಕ್ಕೂ ಹೆಚ್ಚಿನ ಕಾಲ ಸಶಸ್ತ್ರವಾಗಿ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ 6 ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಶರಣಾದರು.

ಶರಣಾದ ನಕ್ಸಲರಿಗೆ ಮುಖ್ಯಮಂತ್ರಿಗಳು ಸಂವಿಧಾನ ಪುಸ್ತಕ ಮತ್ತು ಗುಲಾಬಿ ನೀಡುವ ಮೂಲಕ ಅವರ ಶರಣಾಗತಿಯನ್ನು ಅಂಗೀಕರಿಸಿದರು. ಆ ಮೂಲಕ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದಂತಾಗಿದೆ

2024ರ ನವೆಂಬರ್‌ನಲ್ಲಿ ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ ನಂತರ ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರು ಶಸ್ತ್ರತ್ಯಾಗ ಮಾಡಿ ಶರಣಾಗುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ನಕ್ಸಲ್ ಪುನರ್ವಸತಿ ಸಮಿತಿ ಹಾಗೂ ಶಾಂತಿಗಾಗಿ ನಾಗರಿಕರ ವೇದಿಕೆ ಸದಸ್ಯರು ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಮತ್ತಿತರ ಜಿಲ್ಲೆಗಳ ಅರಣ್ಯ ಪ್ರದೇ ಶದಲ್ಲಿ ಸಕ್ರಿಯರಾಗಿದ್ದ ನಕ್ಸಲೀಯರೊಂದಿಗೆ ಮಾತುಕತೆ ನಡೆಸಿ ಸಮಾಜದ ಮುಖ್ಯವಾಹಿನಿಯೊಂದಿಗೆ ಬರುವಂತೆ ಮಾತುಕತೆ ನಡೆಸಿದ್ದರು. ಅವರ ಮಾತುಕತೆ ಫಲವಾಗಿ ಪ್ರಮುಖ ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿ ಒಟ್ಟು 6 ಮಂದಿ ಶರಣಾಗತಿಗೆ ಒಪ್ಪಿಗೆ ಸೂಚಿಸಿದ್ದರು. ಅದರಂತೆ ಬುಧವಾರ ಸಂಜೆ 6.00 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಆಗಮಿಸಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು.

 

Related Articles

error: Content is protected !!