98
ಬೆಂಗಳೂರು : ಭಯೋತ್ಪಾದಕ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣದಲ್ಲಿ ಬೆಂಗಳೂರು ಮತ್ತು ಕೋಲಾರದ ಐದು ಸ್ಥಳಗಳಲ್ಲಿ ಶೋಧ ನಡೆಸಿದ ಎನ್‌ಐಎ ಅಧಿಕಾರಿಗಳು, ಮನೋವೈದ್ಯ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಜೈಲಿನಲ್ಲಿನ ಕೈದಿಗಳಿಗೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಗೆ ಸೇರುವಂತೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಮಂಗಳವಾರ ಎನ್‌ಐಎ ಅಧಿಕಾರಿಗಳು ಪರಪ್ಪನ ಅಗ್ರಹಾರದಲ್ಲಿರುವ ‘ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಸಹಾಯಕ ಸಬ್-ಇನ್‌ಸ್ಪೆಕ್ಟರ್ ಚಾನ್ಸ್ ಪಾಷಾ ಮತ್ತು ತಲೆಮರೆಸಿಕೊಂಡಿರುವ ಆರೋಪಿಯ ತಾಯಿ ಅನೀಸ್ ಫಾತಿಮಾಳನ್ನು ಬಂಧಿಸಿದ್ದಾರೆ.
ಎನ್‌ಐಎ ಅಧಿಕಾರಿಗಳ ಕಾರ್ಯಾಚರಣೆ ವೇಳೆ, ಬಂಧಿತ ಆರೋಪಿಗಳು ಮತ್ತು ಇತರ ಶಂಕಿತರ ಮನೆಗಳಿಂದ ವಿವಿಧ ಡಿಜಿಟಲ್ ಸಾಧನಗಳು, ನಗದು, ಚಿನ್ನ ಮತ್ತು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ

