ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಜಾರ್ಚ್ ಖಂಡಿಸಿ ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಲು ಉದ್ದೇಶಿಸಿದ್ದ ಧರಣಿ ಸತ್ಯಾಗ್ರಹಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ನೇತೃತ್ವದಲ್ಲಿ ಸೋಮವಾರ ಪಂಚಮಸಾಲಿ ಹೋರಾಟಗಾರರು ಗಾಂಧಿ ಭವನದಿಂದ ನಗರದ ಚನ್ನಮ್ಮ ವೃತ್ತದವರೆಗೆ ಸಾಂಕೇತಿಕವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅನುಮತಿ ಸಿಕ್ಕ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಶ್ರೀಗಳು ತಿಳಿಸಿದ್ದಾರೆ