ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರು ಇಂದು ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಹಾಗೂ ಎಡಪಕ್ಷಗಳ ಐಎನ್ ಡಿಐಎ ಮೈತ್ರಿಕೂಟ ಸರಕಾರ ರಚಿಸಲಿದೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ.