Home » ರಮೇಶ ಜಾರಕಿಹೊಳಿ ಪುತ್ರನಿಂದ ಗಾಳಿಯಲ್ಲಿ ಗುಂಡು
 

ರಮೇಶ ಜಾರಕಿಹೊಳಿ ಪುತ್ರನಿಂದ ಗಾಳಿಯಲ್ಲಿ ಗುಂಡು

by Kundapur Xpress
Spread the love

ಬೆಳಗಾವಿ : ಮಾಜಿ ಸಚಿವ, ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ ಸಾರ್ವಜನಿಕ ವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ.

ಗೋಕಾಕನ ಲಕ್ಷ್ಮಿದೇವಿ ಜಾತ್ರೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಂಭ್ರಮದಲ್ಲಿ ಭಾಗಿಯಾದ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಅವರ ಬೆಂಬಲಿಗರು ಜೈಕಾರ ಕೂಗಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೇವಸ್ಥಾನದ ಮುಂಭಾಗದಲ್ಲಿ ಜಾತ್ರೆಯಲ್ಲಿ ನೂರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಗೋಕಾಕ ನಗರ ಪೊಲೀಸರು ಸಂತೋಷ ಜಾರಕಿಹೊಳಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. 

 

Related Articles

error: Content is protected !!