Home » ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ
 

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ

ಆರ್‌ ಅಶೋಕ್‌

by Kundapur Xpress
Spread the love

ಮಂಡ್ಯ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಉಚಿತವಾಗಿ ಎಲ್ಲ ಸೌಲಭ್ಯಗಳನ್ನೂ ಕೊಡುತ್ತಾರೆಂಬ ಕಾರಣಕ್ಕೆ ಜನ ಸಿದ್ದರಾಮಯ್ಯನವರನ್ನು ಅಧಿಕಾರಕ್ಕೆ ತಂದರು. ಉಚಿತವಾಗಿ ದುಡ್ಡು ಹೊಡೆಯುವ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ವಿಪಕ್ಷ ನಾಯಕ ಆ‌ರ್.ಅಶೋಕ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನಾನು ಕ್ಲೀನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾದಲ್ಲಿ 14 ನಿವೇಶನಗಳನ್ನು ನುಂಗಿ, ಕ್ಲೀನ್ ಎಂದು ಹೇಗೆ ಹೇಳಿ ಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ಅಧಿಕಾರಕ್ಕೆ ಬಂದ ತಕ್ಷಣ ಕೆಂಪಣ್ಣ ಆಯೋಗ ರಚನೆ ಮಾಡಿದರು, 6 ತಿಂಗಳಾಯಿತು, ವರ್ಷವಾದರೂ ವರದಿ ಕೊಡಲಿಲ್ಲ. ಈಗ ದೇಸಾಯಿ ಆಯೋಗ ರಚನೆ ಮಾಡಿದ್ದಾರೆ. ಈಗಲೂ ಅದು 6 ತಿಂಗಳು ಅಲ್ಲ 60 ವರ್ಷವಾದರೂ ವರದಿ ಕೊಡುವುದಿಲ್ಲ. ಕೇವಲ ಜನರ ಕಣ್ಮರೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

   

Related Articles

error: Content is protected !!