96
ಬೆಂಗಳೂರು : ಬಿಜೆಪಿಯಿಂದ ಚಾಮುಂಡೇಶ್ವರಿ ದೇವಾಲಯ ಉಳಿಸಿ ಎಂಬ ಹೋರಾಟ ರೂಪಿಸಲಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಸರಾ ಉತ್ಸವದಲ್ಲಿ ಮೊದಲು ನಂದಿ ಧ್ವಜ ಹಾಗೂ ಗೋ ಪೂಜೆಯಾಗಬೇಕು. ಹಸು ತಿನ್ನುವ ಬಾನು ಮುಸ್ತಾಕ್ ಪೂಜೆ ಹೇಗೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಎಲ್ಲವೂ ಹಿಂದೂ ಶಾಸ್ತ್ರ ಪ್ರಕಾರ ನಡೆಯುತ್ತದೆ. ಹಿಂದೂ ಪಂಚಾಂಗದ ಪ್ರಕಾರ ದಿನಾಂಕ ನಿಗದಿಯಾಗುತ್ತದೆ. ಇಷ್ಟೆಲ್ಲ ಇದ್ದರೂ ಇದು ಹಿಂದೂಗಳದ್ದಲ್ಲ ಎನ್ನುತ್ತಾರೆ. ಮುಸ್ಲಿಮರು ಮೂರ್ತಿ ಪೂಜೆ ಮಾಡುವುದಿಲ್ಲ. ಸಚಿವ ಜಮೀರ್ ಅಹ್ಮದ್ ಅವರು ಮೂರ್ತಿ ಪೂಜೆ ಬಗ್ಗೆ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಶೋಕ್, ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಅಲ್ಲ. ಅದು ಹಿಂದೂಗಳ ಹಬ್ಬ. ನಾಡದೇವತೆಯನ್ನು, ನಾಡಹಬ್ಬವನ್ನು ಕಾಂಗ್ರೆಸ್‌ನವರು ವೋಟಿನ ಹಬ್ಬ ಮಾಡಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.

