ಬೆಂಗಳೂರು : ನನ್ನ ಸುತ್ತಮುತ್ತಲಿನ 40 ಜನರ ಫೋನ್‌ಗಳನ್ನು ರಾಜ್ಯ ಸರಕಾರ ಟ್ಯಾಪ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ‘ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ದೂರಿದರು.
ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ. ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್ ಗಳನ್ನುಸರಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು