146
ಬೆಂಗಳೂರು : ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿ ಎಲ್ಲ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆ.15ರಿಂದ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬಿಜೆಪಿಯ ಭಾರತಿ ಶೆಟ್ಟಿ ಹಾಗೂ ಕಾಂಗ್ರೆಸ್ಸಿನ ಮಧು ಜಿ.ಮಾದೇಗೌಡ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖಾ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಉತ್ಪನ್ನ ಬಳಸಿದಲ್ಲಿ ದಂಡ ವಿಧಿಸುವಂತೆ ಸಂಬಂಧಪಟ್ಟ ದೇವಾಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದರೆ ಈ ಆದೇಶ ಖಾಸಗಿ ದೇವಾಲಯಗಳಿಗೆ ಇದು ಅನ್ವಯವಾಗುವುದಿಲ್ಲ ಎಂದು ಸಚಿವರು ಉತ್ತರಿಸಿದರು.

