ಬೆಳಗಾವಿ : ಲಕ್ಷ್ಮೀ ಹೆಬ್ಬಾಳ್ಳರ್ ವಿರುದ್ಧ ಮೇಲ್ಮನೆ ಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋ ಪದ ಮೇರೆಗೆ ಬಂಧಿಸಿದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಬೆಳಗಾವಿ ಪೊಲೀಸರು ಗುರುವಾರ ರಾತ್ರಿಯಿಡೀ ಸುತ್ತಾಡಿಸಿದ್ದಾರೆ. ಖಾನಾಪುರ, ಕಿತ್ತೂರು, ರಾಮದುರ್ಗ, ಲೋಕಾಪುರ, ಅಂಕಲಿ ಸೇರಿ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಸುಮಾರು 500 ಕಿ.ಮೀ.ಗೂ ದೂರ ಸುತ್ತಾಡಿಸಿದ್ದಾರೆ. ಪೊಲೀಸರ ಈ ನಡೆಗೆ ಆಕ್ರೋಶ ವ್ಯಕ್ತವಾಗಿ ದ್ದು, ಬಿಜೆಪಿ ನಾಯಕರು ಇದನ್ನು ತೀವ್ರವಾಗಿ ಖಂಡಿಸಿದ್ದಾರೆ. ಆದರೆ, ಸುರಕ್ಷತೆ ದೃಷ್ಟಿಯಿಂದ ಶಾಸಕರನ್ನು ವಿವಿಧೆಡೆ ಕರೆದು ಹೋಗ ಬೇಕಾಯಿತು ಎಂದು ಪೊಲೀಸರು ತಮ್ಮ ಕ್ರಮ ಸಮರ್ಥಿಸಿಕೊಂಡಿದ್ದಾರೆ.