Home » ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ದ ಮತ್ತೊಂದು ಪಾದಯಾತ್ರೆ
 

ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ದ ಮತ್ತೊಂದು ಪಾದಯಾತ್ರೆ

ಪ್ರಹ್ಲಾದ್‌ ಜೋಶಿ

by Kundapur Xpress
Spread the love

ನವದೆಹಲಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿ, ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ನಡೆಯಲಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಸರಿಯಾದ ದಿಕ್ಕಿನಲ್ಲೇ ನಡೆಯುತ್ತಿದೆ. ಪಕ್ಷದೊಳಗೆ ಯಾವುದೇ ಅಪಸ್ವರವಿಲ್ಲ ಎಂದರು. ಬಿಜೆಪಿ ಹೋರಾಟಕ್ಕೆ ಮೊದಲನೇ ಪಾದಯಾತ್ರೆ, ಎರಡನೇ ಪಾದಯಾತ್ರೆ ಎನ್ನಬೇಕಿಲ್ಲ. ಪಕ್ಷದೊಳಗೆ ಎಲ್ಲರೂ ಕೂಡಿಯೇ ಹೋರಾಟ ತೀವ್ರಗೊಳಿಸುತ್ತೇವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಗೃಹ ಸಚಿವರು ಸೇರಿದಂತೆ ನಾಯಕರೆಲ್ಲ ಸೇರಿ ಮತ್ತೊಂದು ಸುತ್ತಿನ ಹೋರಾಟದ ಬಗ್ಗೆ ನಿರ್ಧರಿಸಲಿದ್ದಾರೆ ಎಂದಿದ್ದಾರೆ

   

Related Articles

error: Content is protected !!