ಹುಬ್ಬಳ್ಳಿ : ಕಾಂಗ್ರೆಸ್ ಮಹಾನ್ ಕಳ್ಳರು, ಖದೀಮರ ಪಕ್ಷವಾಗಿದ್ದು, ಇಡೀ ದೇಶದಲ್ಲಿ ಸುಳ್ಳು ಆಶ್ವಾಸನೆ ಕೊಟ್ಟಿದೆ ಅಲ್ಲದೆ ರಾಜ್ಯವನ್ನು ದಿವಾಳಿಯತ್ತ ನೂಕುವ ಪ್ರಯತ್ನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಅವರ ಹೇಳಿಕೆಯ ಶೈಲಿ ನೋಡಿದರೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆವರೆಗೂ ಸುಮ್ಮನಿರಿ ಅಂದ ಹಾಗೇ ಇದೆ. ಬಳಿಕ ಗ್ಯಾರಂಟಿ ಯೋಜನೆಗಳನ್ನು ತೆಗೆದು ಹಾಕಿ ಎಂಬ ಮಾನಸಿಕತೆಯಲ್ಲಿಅವರಿದ್ದಾರೆ.
ಐದು ಗ್ಯಾರಂಟಿಗಳನ್ನು ಎಲ್ಲಿ ಪೂರೈಸಿದ್ದಾರೆ. ಯುವನಿಧಿ ಯೋಜನೆ 2023-24ರಲ್ಲಿ ಪದವಿ ಮುಗಿಸಿದ ಯಾವ ಯುವಕರಿಗೂ ನೀಡಿಲ್ಲ. ಕಾಂಗ್ರೆಸ್ ಎಂಥ ಖದೀಮರು ಅಂದರೆ ನಾವು ನೀಡುತ್ತಿದ್ದ 5 ಕೆಜಿ ಅಕ್ಕಿಯನ್ನು ತಾವೇ ನೀಡುತ್ತಿದ್ದೇವೆ ಹೇಳುತ್ತಿದ್ದಾರೆ. ಎಂದು ಇಂತಹ ಕಳ್ಳರನ್ನು ಎಲ್ಲಿ ಹುಡುಕಿದರೂ ಸಿಗುವುದಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ನ ಸುಳ್ಳು ಆಶ್ವಾಸನೆಗೆ ಕಿವಿಗೊಡದ ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ಜನರು ಅವರನ್ನು ಕಡೆಗಣಿಸಿದ್ದಾರೆ. ಅದೇ ರೀತಿ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲೂ ಕಿತ್ತೆಸೆಯುತ್ತಾರೆ ಎಂದು ಭವಿಷ್ಯ ನುಡಿದರು.