ಹುಬ್ಬಳ್ಳಿ : ವಿಧಾನ ಪರಿಷತ್ ಸಭಾಪತಿ ಕಚೇರಿ ಹಾಗೂ ಇತರ ವಿಷಯಗಳಲ್ಲಿ ರಾಜ್ಯ ಸರ್ಕಾರ ಅನಗತ್ಯ ಸಂಘರ್ಷ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸುವರ್ಣಸೌಧದಲ್ಲಿ ನಡೆದ ಸಿ.ಟಿ.ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ನಡುವಿನ ವಾಗ್ವಾದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮೂಲಕ ರಾಜ್ಯ ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ರಾಜ್ಯ ಸರ್ಕಾರದ ನಡೆ ವಿರೋ ಧಿಸಿ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಸರ್ಕಾರ ಅವರ ಸಲಹೆ ಸೂಚನೆ ಪಾಲಿಸುವುದು ಒಳ್ಳೆಯದು ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ ಎಂದು ಅವರು ಆರೋಪಿಸಿದರು.