Home » ಜಮೀರನನ್ನು ಸಂಪುಟದಿಂದ ಕಿತ್ತೊಗೆಯಲಿ
 

ಜಮೀರನನ್ನು ಸಂಪುಟದಿಂದ ಕಿತ್ತೊಗೆಯಲಿ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ

by Kundapur Xpress
Spread the love

ಹುಬ್ಬಳ್ಳಿ : ವಕ್ಸ್ ಮೂಲಕ ರಾಜ್ಯದಲ್ಲಿ ಕೋಮು- ದ್ವೇಷ ಹರಡುತ್ತಿರುವ, ಇಸ್ಲಾಮಿಕರಣಕ್ಕೆ ಮುಂದಾಗಿರುವ ಸಚಿವ ಜಮೀ‌ರ್ ಅಹ್ಮದ್ ಖಾನ್ ಅವರನ್ನು ಮುಖ್ಯಮಂತ್ರಿಯವರು ಸಚಿವ ಸಂಪುಟದಿಂದ ಕಿತ್ತೊಗೆಯಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಡೋಂಗಿ ಜಾತ್ಯತೀತತೆ ಮತ್ತು ಮುಸ್ಲಿಮರ ತುಷ್ಟಿಕರಣದ ನೀತಿಯಿಂದಾಗಿ ದೇವಸ್ಥಾನಗಳ ಒಂದು ಇಂಚು ಜಾಗವೂ ಹೆಚ್ಚಾಗಿಲ್ಲ. ಆದರೆ, ಎಲ್ಲ ಪ್ರಮುಖ ಮತ್ತು ಹೆಚ್ಚು ಆದಾಯ ಇರುವ ದೇವಸ್ಥಾನಗಳನ್ನು ಸರ್ಕಾರ ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ ಎಂದರು. ಬಿಜೆಪಿ ಸರ್ಕಾರ ಇದ್ದಾಗಲೂ ರೈತರಿಗೆ ನೋಟಿಸ್ ನೀಡಲಾಗಿತ್ತು ಎಂದು ಕಾಂಗ್ರೆಸ್‌ನವರು ಆರೋಪಿಸುತ್ತಿದ್ದಾರೆ ಆ ಸಮಯದಲ್ಲಿ ರೈತರಿಗೆ ನೋಟಿಸ್ ನೀಡಿದ್ದರೆ ಅದು ತಪ್ಪು. ಆಗ ಯಾರೂ ನಮ್ಮ ಗಮನಕ್ಕೆ ತಂದಿರಲಿಲ್ಲ. ನಮ್ಮ ಸರ್ಕಾರ ಇದ್ದುದರಿಂದ ವಕ್ಸ್ ಮಂಡಳಿಯವರು ಗೌಪ್ಯ ವಾಗಿ ನೋಟಿಸ್ ನೀಡಿದ್ದರು. ಆಗ ನಮ್ಮ ಗಮನಕ್ಕೆ ಬಂದಿದ್ದರೆ ಮಂಡಳಿಯವರಿಗೆ ಆಗಲೇ ಎಚ್ಚರಿಕೆ ನೀಡಿ, ನೋಟಿಸ್ ಹಿಂಪಡೆಯಲು ಸೂಚನೆ ನೀಡುತ್ತಿದ್ದೆವು. ಈಗ ರೈತರು ನಮ್ಮ ಗಮನಕ್ಕೆ ತಂದಿದ್ದರಿಂದ ಹೋರಾಟ ಮಾಡಲಾಗುತ್ತಿದೆ ಎಂದರು.

   

Related Articles

error: Content is protected !!