ಬೆಂಗಳೂರು : ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರದ ಬಗ್ಗೆ ಗೃಹ ಸಚಿವ ತೀಕ್ಷ್ಯವಾಗಿ ಪ್ರತಿಕ್ರಿಯೆ ನೀಡಿದ್ದು, ಸಿಎಂ ಹಾಗೂ ಡಿಸಿಎಂ ವಿರುದ್ಧವೇ ಹರಿಹಾಯ್ದಿದ್ದಾರೆ. ಇಬ್ಬರು ನಾಯಕರ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಪ್ಪಂದ ಆಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ದಿಲ್ಲಿ ಮತ್ತು ರಾಜ್ಯದಲ್ಲಿ ಇಬ್ಬರು, ಮೂವರನ್ನು ಕೇಳಿದ್ದೇನೆ. ಒಪ್ಪಂದ ಆಗಿದೆ ಅಂತ ಯಾರೂ ಹೇಳಿಲ್ಲ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಅಂತಹ ಒಪ್ಪಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ ? ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ ಆದ್ದರಿಂದ ಹೈಕಮಾಂಡ್ ಅಂತಿಮವಾಗಿ ಏನು ತೀರ್ಮಾನ ಮಾಡುತ್ತದೆ ಅದಕ್ಕೆ ನಾವು ಬದ್ದವಾಗಿರುತ್ತೇವೆ. ನಾವ್ಯಾರು ಕೂಡ ಹೈಕಮಾಂಡ್ ಅನ್ನು ಬಿಟ್ಟು ಹೋದವರಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ತಿಳಿಸಿದರು.