Home » ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ
 

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

by Kundapur Xpress
Spread the love

ಬೆಂಗಳೂರು : ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಗುರುವಾರ ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಲಾಯಿತು. ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗೈರು ಹಾಜರಾಗಿದ್ದರು. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಈ ಪ್ರತಿಭಟನೆಯಲ್ಲಿ ಉಪನಾಯಕ ಅರವಿಂದ್ ಬೆಲ್ಲದ್, ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಆರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಜನಾರ್ದನ ರೆಡ್ಡಿ, ಗೋಪಾಲಯ್ಯ, ಸಿದ್ದು ಸವದಿ ಸೇರಿದಂತೆ ಬಹುತೇಕ ಎಲ್ಲಾ ಶಾಸಕರು, ಮುಖಂಡರು ಭಾಗಿಯಾಗಿದ್ದರು.

ಪ್ರತಿಭಟನೆ ವೇಳೆ ಶಾಸಕರು, ಮುಖಂಡರು ವಿಧಾನಸೌಧದೊಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಪಶ್ಚಿಮದ್ವಾರದ ಬಳಿಯೇ ಪ್ರತಿಭಟನಾಕಾರರನ್ನು ತಡೆದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಹಾಗೂ – ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

   

Related Articles

error: Content is protected !!