Home » ಧರ್ಮಸ್ಥಳ ಪರ ರಾಜ್ಯಾದ್ಯಂತ ಪ್ರತಿಭಟನೆ
 

ಧರ್ಮಸ್ಥಳ ಪರ ರಾಜ್ಯಾದ್ಯಂತ ಪ್ರತಿಭಟನೆ

by Kundapur Xpress
Spread the love

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಅದರ ಜವಾಬ್ದಾರಿ ಹೊತ್ತಿರುವ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದವು.

ಹಾಸನ,ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೀದರ್, ಅಥಣಿ, ರಾಯಬಾಗದಲ್ಲಿ ಭಕ್ತರು, ಹಿಂದೂ ಪರ ಸಂಘಟನೆಗಳು, ವಿವಿಧ ಮಠಗಳ ಸ್ವಾಮೀಜಿಗಳು ಹೋರಾಟ ನಡೆಸಿದರು.

ಹಾಸನದಲ್ಲಿ ಯಸಳೂರಿನ ತೆಂಕಲಗೂಡು ಮಠದ ಮಠಾಧೀಶ ಚನ್ನಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಹೇಮಾವತಿ ಪ್ರತಿಮೆ ಬಳಿ ಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ, ನಗರದ ಎನ್. ಆರ್.ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. 

 

Related Articles

error: Content is protected !!