ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕಿ ನಿಗಮದ ಅಧ್ಯಕ್ಷರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಲೀನ್ ಚಿಟ್ ನೀಡಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರೆಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ
ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಾತ್ರವೇ ಇಲ್ಲ. ಬ್ಯಾಂಕ್ ಅಧಿಕಾರಿಗಳು ಹಗರಣದ ತನಿಖೆ ಸಿಬಿಐಗೆ ವಹಿಸಿದರು. ಆದರೆ, ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿಹಾಕಿದ್ದಾರೆ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್ ಮಾಡಿದೆ. ಅದಕ್ಕೆ ಕ್ಲೀನ್ ಚಿಟ್ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.