ಬೆಂಗಳೂರು : ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್ ಸರ್ಕಾರವಿದ್ದು, ಕಾಂಗ್ರೆಸ್ ಸರ್ಕಾರ ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲು ಸಿದ್ದವಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಇದೇ ವೇಳೆ ಘಟನೆ ಕುರಿತು ಸರ್ಕಾರಕ್ಕೆ ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆಯಾಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಿಲ್ಲವೇಕೆ ಎಂಬುದೂ ಸೇರಿದಂತೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟೀಕಿಸಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ ಬೇಜವಾಬ್ದಾರಿ ಹಾಗೂನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ