Home » ಕಾಂಗ್ರೆಸ್ ಆಡಳಿತದಲ್ಲಿ ಅಪರಾಧ ಹೆಚ್ಚಳ
 

ಕಾಂಗ್ರೆಸ್ ಆಡಳಿತದಲ್ಲಿ ಅಪರಾಧ ಹೆಚ್ಚಳ

by Kundapur Xpress
Spread the love

ಮೈಸೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯ ದಲ್ಲಿ ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಡೀ ರಾಜ್ಯವೇ ಬೆಚ್ಚಿ ಬೀಳುವ ಘಟನೆ ಮೈಸೂರಿನಲ್ಲಿ ನಡೆದಿತ್ತು ಪೋಲಿಸರನ್ನು ಕಂಡರೆ ದೊಡ್ಡ ರಾಜಕಾರಣಿಗಳು, ದೊಡ್ಡ ದೊಡ್ಡವರೇ ಭಯಬೀಳುತ್ತಾರೆ. ಆದರೆ ಈ ಕಿಡಿಗೇಡಿಗಳು ಪೋಲಿಸರ ಮೇಲೆ ದಾಳಿ ಮಾಡಿದ್ದಾರೆ. ಈಗ ಕೆಲವೇ ಮಂದಿಯನ್ನ ಮಾತ್ರ ಬಂಧಿಸಿದ್ದಾರೆ ಎಂದರು.

 

Related Articles

error: Content is protected !!