160
ರಾಯಚೂರು : ಗ್ರಾಮದಲ್ಲಿ ನಡೆದ ಶಂಕರಲಿಂಗೇಶ್ವರ ಜಾತ್ರೆ ಮಹೋತ್ಸವದ ಹಿನ್ನೆಲೆಯಲ್ಲಿ ಮಸ್ಕಿ ಶಾಸಕ ಬಸನಗೌಡ ತುರವಿಹಾಳ ಕುಟುಂಬದ ಸದಸ್ಯರು ಮೊಲಗಳ ಬೇಟೆಯಾಡಿ, ಮಾರಕಾಸ್ತ್ರಗಳನ್ನು ಹಿಡಿದು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿರುವುದರಿಂದ ಈಗ ಶಾಸಕ ಕುಟುಂಬಕ್ಕೆ ಸಂಕಷ್ಟ ತಂದೊಡ್ಡಿದೆ.
ಸೋಮವಾರ ನಡೆದಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ಶಾಸಕರ ಸಹೋದರ, ಪುತ್ರ ಹಾಗೂ ಸ್ಥಳೀಯ ಅನೇಕರು ಮೊಲಗಳ ಬೇಟೆ ಹಾಗೂ ಶಸ್ತ್ರಾಸ್ತ್ರಗಳೊಂದಿಗೆ ಮೆರವಣಿಗೆ ಮಾಡಿದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯಿದೆ 1972, 51ರ ಅಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣದಲ್ಲಿ ಶಾಸಕರ ಸಹೋದರ ಸಿದ್ದನಗೌಡ ಎ1, ಶಾಸಕರ ಪುತ್ರ ಸತೀಶ್ ಗೌಡ ಎ2, ಸ್ಥಳೀಯ ದುರ್ಗೇಶ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ

