ಬೆಂಗಳೂರು : ಕಲಾಪವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಭ್ರಷ್ಟಕಾಂಗ್ರೆಸ್ ಸರ್ಕಾರದ ವಿರುದ್ದ ಎನ್‌ಡಿಎ ನಿಯೋಗ ರಾಜ್ಯಪಾಲರಿಗೆ ಗುರುವಾರ ದೂರು ಸಲ್ಲಿಸಿದೆ. ವಿಧಾನಸಭೆ ವಿಪಕ್ಷನಾಯಕ ಆರ್. ಅಶೋಕ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸಿ.ಬಿ.ಸುರೇಶ್ ಬಾಬು ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಯಿತು.
ಪೂರ್ವ ನಿಗದಿಯಂತೆ ಜು.15ರಿಂದ 26ರವರೆಗೆ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನ ನಡೆಯಬೇಕಿತ್ತು. ಆದರೆ, ಉಭಯ ಸದನಗಳಲ್ಲಿ ಬುಧವಾರದಿಂದ ಮುಡಾ ಹಗರಣಕ್ಕೆ ಸಂಬಂಧಿಸಿ ಚರ್ಚೆಗೆ ಅವಕಾಶ ಕೋರುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಧರಣಿ ನಡೆಸುತ್ತಿರುವುದರಿಂದ ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.