Home » ಮುನಿಸು ಶಮನಕ್ಕೆ ಹೈಕಮಾಂಡ್‌ ಪ್ರವೇಶ : ಉಸ್ತುವಾರಿ ಇಂದು ಬೆಂಗಳೂರಿಗೆ
 

ಮುನಿಸು ಶಮನಕ್ಕೆ ಹೈಕಮಾಂಡ್‌ ಪ್ರವೇಶ : ಉಸ್ತುವಾರಿ ಇಂದು ಬೆಂಗಳೂರಿಗೆ

by Kundapur Xpress
Spread the love

ಬೆಂಗಳೂರು : ರಾಜ್ಯ ಸರ್ಕಾರದ ಸಚಿವರು, ಅಧಿಕಾರಿಗಳ ಧೋರಣೆ  ವಿರುದ್ಧ ಸ್ವಪಕ್ಷೀಯ ಶಾಸಕರೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಹವಾಲು ಆಲಿಸಲು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾವರು ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.  

ಸತತ 3 ದಿನಗಳ ಕಾಲ 42 ಮಂದಿ ಕಾಂಗ್ರೆಸ್ ಶಾಸಕರೊಂದಿಗೆ ಮುಖಾ ಮುಖಿ ಚರ್ಚಿಸಿ ಅಹವಾಲು ಆಲಿಸಲಿದ್ದಾರೆ ಎನ್ನಲಾಗಿದೆ.

ಶಾಸಕರಾದ ಬಿ.ಆರ್. ಪಾಟೀಲ್ ಹಾಗೂ ರಾಜು ಕಾಗೆ ಅವರು ಆಡಳಿತ ವೈಫಲ್ಯದ ಬಗ್ಗೆ ಮಾಡಿರುವ ಬಹಿರಂಗ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಜತೆಗೆ ಹಲವು ಶಾಸಕರು ಅನುದಾನ ಕೊರತೆ, ಸಚಿವರ ಅಸಹಕಾರ, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸಿ ಜೂ.30ರಿಂದ ಜು.2ರವರೆಗೆ 3 ದಿನಗಳ ಕಾಲ ಬೆಂಗಳೂರು ವಿಭಾಗದ 27 ಮಂದಿ, ಮೈಸೂರು ವಿಭಾಗದ 13 ಶಾಸಕರೊಂದಿಗೆ ಮೊದಲ ಹಂತದಲ್ಲಿ ‘ಒನ್ ಟು ಒನ್’ ಸಭೆ ನಡೆಸಲಿದ್ದಾರೆ.

ಇದಕ್ಕೂ ಮೊದಲು ಆಡಳಿತ ವೈಫಲ್ಯದ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿರುವ ಶಾಸಕ ರಾಜು ಕಾಗೆ ಹಾಗೂ ಬಿ. ಆರ್. ಪಾಟೀಲ್ ಜತೆ ಪ್ರತ್ಯೇಕವಾಗಿ ತಲಾ ಅರ್ಧಗಂಟೆ ಚರ್ಚೆ ನಡೆಸಿ ಮನವೊಲಿಕೆ ಯತ್ನ ಮಾಡಲಿದ್ದಾರೆ ಎನ್ನಲಾಗಿದೆ.

 

Related Articles

error: Content is protected !!