Home » ಕಪ್ಪು ಹಣ ಬಿಳಿ ಮಾಡಲು ಕಂಪೆನಿ ಸ್ಥಾಪನೆ
 

ಕಪ್ಪು ಹಣ ಬಿಳಿ ಮಾಡಲು ಕಂಪೆನಿ ಸ್ಥಾಪನೆ

ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್

by Kundapur Xpress
Spread the love

ಬೆಂಗಳೂರು : ದುಬೈನಿಂದ ಚಿನ್ನ ಕಳ್ಳ ಸಾಗಣೆ ವೇಳೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಅಕ್ರಮವಾಗಿ ಗಳಿಸಿದ ಹಣವನ್ನು ಸಕ್ರಮಗೊಳಿಸಲು ನಗರದಲ್ಲಿ ತನ್ನ ಒಡೆತನದ ಕಂಪನಿಗಳನ್ನೇ ಬಳಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ರನ್ಯಾ ಒಡೆತನದ ಕಂಪನಿಗಳ ಹಣಕಾಸು ವಹಿವಾಟು ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. ಆರೋಪಿ ರನ್ಯಾ ರಾವ್ ‘ವೈರಾ ಡೈಮಂಡ್ಸ್ ಟ್ರೇಡಿಂಗ್’ ಹೆಸರಿನಲ್ಲಿ ಅಧಿಕೃತವಾಗಿ ದುಬೈನಲ್ಲಿ ಕಂಪನಿ ತೆರೆದಿರುವುದು ಇ.ಡಿ ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ. 2023ರಲ್ಲಿ ದುಬೈನಲ್ಲಿ ‘ವೈರಾ ಡೈಮಂಡ್ಸ್ ಟ್ರೇಡಿಂಗ್’ ಹೆಸರಿನಲ್ಲಿ ಕಂಪನಿ ತೆರೆದು ಆ ಕಂಪನಿಯನ್ನು ನೋಂದಣಿ ಸಹ ಮಾಡಿದ್ದಾರೆ ಎಂದು ತಿಳಿದು ಬಂದಿದೆ

 

Related Articles

error: Content is protected !!