ಬೆಳಗಾವಿ : ಕೆಎಲ್‌ಇ ಸಂಸ್ಥೆಯು ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗುತ್ತಿದ್ದು ಇಂದು ಜ.3 ರಂದು ಸಂಜೆ 4.00 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮುಖ್ಯ ಅತಿಥಿಯಾಗಿ ಕೇಂದ ಸಚಿವ ಪ್ರಹ್ಲಾದ ಜೋಶಿ ಆಗಮಿಸುವರು ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸುವರು. ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಉಪಸ್ಥಿತರಿರುವರು. ಸಮಾ ರಂಭದ ಪ್ರವೇಶ ಪತ್ರವು ಕೂಡ ಆಮಂತ್ರಣ ಪತ್ರಿಕೆಯೇ ಆಗಿರುತ್ತದೆ. ನೀರಿನ ಬಾಟಲ್ ಕೈಚೀಲ, ಛತ್ರಿ, ಮೊಬೈಲ್ ಇನ್ನಿತರ ವಸ್ತುಗಳನ್ನು ನಿಷೇಧಿಸಲಾಗಿದೆ.