Home » ಮದ್ಯ ದರ ಹೆಚ್ಚಳ ಪ್ರಸ್ತಾವ ಕೈಬಿಡಿ : ವೈನ್ ಮರ್ಚೆಂಟ್ಸ್ ಆಗ್ರಹ
 

ಮದ್ಯ ದರ ಹೆಚ್ಚಳ ಪ್ರಸ್ತಾವ ಕೈಬಿಡಿ : ವೈನ್ ಮರ್ಚೆಂಟ್ಸ್ ಆಗ್ರಹ

by Kundapur Xpress
Spread the love

ಬೆಂಗಳೂರು : ಮದ್ಯದ ದರ ಹೆಚ್ಚಳ ಪ್ರಸ್ತಾವವನ್ನು ಸರ್ಕಾರ ಕೈಬಿಡಬೇಕು ಎಂದು ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಈ ಬಗ್ಗೆ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ ಅವರು ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಐಎಂಎಲ್ ಮದ್ಯ ಮತ್ತು ಬಿಯರ್‌ ಮೇಲೆ ಹೆಚ್ಚುವರಿ ಅಬಕಾರಿ ಶುಲ್ಕ ವಿಧಿಸುವಾಗ ವೈಜ್ಞಾನಿಕ ಮಾನದಂಡ ಅಳವಡಿಸಿಕೊಳ್ಳಬೇಕು. ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯತೆಗೆ ಸನ್ನದುದಾರ ಮತ್ತು ಗ್ರಾಹಕ ಬಲಿ ಆಗಬಾರದು ಎಂದು ಮನವಿ ಮಾಡಿದ್ದಾರೆ. ಮದ್ಯದ ದರ ಹೆಚ್ಚಳವಾದರೆ ಅಕ್ಕ ಪಕ್ಕದ ರಾಜ್ಯಗಳಿಂದ ನಕಲಿ ಮದ್ಯ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದ್ದು ದರ ಹೆಚ್ಚಳದ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು. ಚಿಲ್ಲರೆ ಮದ್ಯ ಮಾರಾಟಗಾರರು ಗ್ರಾಹಕರ ಜೊತೆ ಸಂವಹನ ನಡೆಸುವುದರಿಂದ ಚಿಲ್ಲರೆ ಮದ್ಯ ಮಾರಾಟಗಾರರ ಸಭೆ ಕರೆದು ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

 

Related Articles

error: Content is protected !!