107
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ನೀಡಿರುವ ಜಾಮೀನು ಮುಂದು ವರೆಸಬೇಕೋ ಅಥವಾ ರದ್ದುಪಡಿಸಬೇಕೋ ಎಂಬುದರ ಬಗ್ಗೆ ಸುಪ್ರೀಂಕೋರ್ಟ್ ಇಂದು ಗುರುವಾರ ಮಹತ್ವದ ತೀರ್ಪು ನೀಡಲಿದೆ.
ದರ್ಶನ್ ಮತ್ತು ಪ್ರಕರಣದ ಇತರೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿ.13ರಂದು ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಅರ್ಜಿಯನ್ನು ಜು.24ರಂದು ವಿಚಾರಣೆ ನಡೆಸಿದ ನ್ಯಾ| ಜೆ.ಬಿ. ಪರ್ದಿವಾಲಾ ಮತ್ತು ನ್ಯಾ| ಆರ್. ಮಹಾದೇವನ್ ಅವರ ಪೀಠ, ತೀರ್ಪು ಕಾಯ್ದಿರಿಸಿತ್ತು

