Home » ಮನೆಯೂಟದ ಅರ್ಜಿ ಹಿಂಪಡೆದ ದರ್ಶನ್
 

ಮನೆಯೂಟದ ಅರ್ಜಿ ಹಿಂಪಡೆದ ದರ್ಶನ್

by Kundapur Xpress
Spread the love

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತಮಗೆ ಮನೆಯೂಟ, ಹಾಸಿಗೆ ಮತ್ತು ಪುಸ್ತಕ ಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಅವರ ಪರ ವಕೀಲರು ಹಿಂಪಡೆದಿದ್ದಾರೆ. ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ ನಡೆಸಿತು.

ದರ್ಶನ್ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು ಹೈಕೋರ್ಟ್ ನಿರ್ದೇಶನದಂತೆ ಮನೆ ಊಟ ಪೂರೈಸಲು ಜೈಲು ಅಧಿಕಾರಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾಧೀನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ, ಹೈಕೋಟ್ನಲ್ಲಿ ಅರ್ಜಿ ಹಿಂಪಡೆಯಲು ಮೆಮೊ ಸಲ್ಲಿಸಿದ್ದೇವೆ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಿ, ಹೊಸ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಈ ಅರ್ಜಿ ಹಿಂಪಡೆಯಲು ಅನುಮತಿಸಬೇಕು ಎಂದು ಕೋರಿದರು. ಇದನ್ನು ಪುರಸ್ಕರಿಸಿದ ಪೀಠವು ಅರ್ಜಿ ಹಿಂಪಡೆಯಲು ಅನುಮತಿ ನೀಡಿತು.

   

Related Articles

error: Content is protected !!