Home » ರೇಣುಕಾ ಹತ್ಯೆಯಲ್ಲಿ ಪವಿತ್ರಾ ಪಾತ್ರವಿಲ್ಲ
 

ರೇಣುಕಾ ಹತ್ಯೆಯಲ್ಲಿ ಪವಿತ್ರಾ ಪಾತ್ರವಿಲ್ಲ

ಹೈಕೋರ್ಟ್‌ನಲ್ಲಿ ವಾದ ಮಂಡನೆ

by Kundapur Xpress
Spread the love

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಮತ್ತು ಕೊಲೆಯಲ್ಲಿ ಪವಿತ್ರಾ ಗೌಡ ಪಾತ್ರವಿಲ್ಲ. ಕೊಲೆಗೆ ಅವರಿಂದ ಪಿತೂರಿ ನಡೆದಿಲ್ಲ, ಪಟ್ಟಣಗೆರೆ ಶೆಡ್‌ ಗೆ ಕರೆತಂದಾಗ ದರ್ಶನ್ ಜೊತೆ ತೆರಳಿದ್ದ ಆಕೆ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದು ಅಲ್ಲಿಂದ ತೆರಳಿದ್ದಾರೆ. ನಂತರ ಏನಾಗಿದೆ ಎಂಬುದೂ ಅವರಿಗೆ ಗೊತ್ತಿಲ್ಲ.ಆಕೆ ಮಹಿಳೆಯಾಗಿದ್ದು ಜಾಮೀನು ನೀಡಬೇಕು ಎಂದು ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಮಂಗಳವಾರ ಹೈಕೋರ್ಟ್‌ಗೆ ಕೋರಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ, ಆರ್.ನಾಗರಾಜು, ಎಂ. ಲಕ್ಷ್ಮಣ್, ಅನು ಕುಮಾರ್ ಮತ್ತು ಜಗದೀಶ್ ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠ ಮಂಗಳವಾರ ವಿಚಾರಣೆಯನ್ನು ನಡೆಸಿತು.

ಪವಿತ್ರಾ ಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್, ರೇಣುಕಾಸ್ವಾಮಿ ಕೊಲೆಗೆ ಪವಿತ್ರಾ ಯಾವುದೇ ಪಿತೂರಿ ನಡೆಸಿಲ್ಲ. ಪಟ್ಟಣಗೆರೆಯ ಜಯಣ್ಣ ಶೆಡ್‌ಗೆ ಕರೆತಂದಾಗ ದರ್ಶನ್ ಜೊತೆ ತೆರಳಿದ್ದ ಪವಿತ್ರಾ ಗೌಡ ರೇಣುಕಾಸ್ವಾಮಿ ಕಪಾಳಕ್ಕೆ ಕೇವಲ ಒಂದು ಬಾರಿ ಹೊಡೆದಿದ್ದಾರೆ ಎಂದು ವಿವರಿಸಿದರು.

ಅಲ್ಲದೆ, ಕೊಲೆ ಮಾಡುವ ಉದ್ದೇಶದಿಂದ ಬಲವಂತವಾಗಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಅಹಹರಣ ಮಾಡಿ ತರಲಾಗಿದೆ ಎಂಬುದನ್ನು ದೃಢಪಡಿಸುವ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ, ನಟ ಚಿಕ್ಕಣ್ಣ, ನವೀನ್ ಕುಮಾರ್, ಯಶಸ್ ಸೂರ್ಯ ಅವರ ಹೇಳಿಕೆಗಳನ್ನು ಪರಿಶೀಲಿಸಿದರೆ ಸೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಮಾಡುವ ಸಂಬಂಧ ಯಾವುದೇ ಮಾತುಕತೆ ನಡೆದಿಲ್ಲ ಎಂಬುದು ಸ್ಪಷ್ಟ, ಆದ್ದರಿಂದ ಕೊಲೆ ಮಾಡುವ ಷಡ್ಯಂತ್ರದಿಂದ ರೇಣುಕಾ ಸ್ವಾಮಿಯನ್ನು ಅಪಹರಿಸಿಲ್ಲ. ಪತಿಯನ್ನೇ ಕೊಂದ ಪತ್ನಿಗೂ ಮಹಿಳೆ ಎಂಬ ಕಾರಣಕ್ಕೆ ಜಾಮೀನು ಸಿಕ್ಕಿದೆ. ಪವಿತ್ರಾಗೌಡಗೆ 9ನೇ ತರಗತಿ ಓದುತ್ತಿರುವ ಪುತ್ರಿ ಇದ್ದಾಳೆ ಈ ಎಲ್ಲ ಅಂಶಗಳನ್ನು ಪರಿಗಣಿಸಿ ಆಕೆಗೆ ಜಾಮೀನು ನೀಡಬೇಕು ಎಂದು ಕೋರಿದರು

ಸಮಯಾವಕಾಶದ ಕೊರತೆ ಹಿನ್ನೆಲೆಯಲ್ಲಿ ನ್ಯಾಯಪೀಠವು ಅರ್ಜಿಗಳ ವಿಚಾರಣೆಯನ್ನು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು

 

Related Articles

error: Content is protected !!