144
ವಿಜಯಪುರ : ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿ ಯಿಂದ 6 ವರ್ಷ ಉಚ್ಚಾಟನೆ ಮಾಡಿರುವ ಹೈಕಮಾಂಡ್ ನಿಲುವನ್ನು ಖಂಡಿಸಿ ವಿಜಯಪುರ ಜಿಲ್ಲೆಯಲ್ಲಿ ಪಕ್ಷದ 174 ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿಯ ನಗರ ಮಂಡಲದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲ ಮೋರ್ಚಾಗಳ 174 ಪದಾಧಿಕಾರಿಗಳು ಅಧಿಕೃತವಾಗಿ ಗುರುವಾರ ತಮ್ಮ ಹುದ್ದೆಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ ತಿಳಿಸಿದ್ದಾರೆ.
ಯತ್ನಾಳ್‌ರನ್ನು ಉಚ್ಚಾಟನೆ ಮಾಡಿದ್ದರಿಂದ ಮನಸಿಗೆ ನೋವುಂಟಾಗಿದೆ ಎಂದು ಪದಾಧಿಕಾರಿಗಳು ಆಕ್ರೋಶ ಹೊರಹಾಕಿದ್ದಾರೆ. ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸಾಮಾಜಿಕ ಜಾಲತಾಣದ ಸಂಚಾಲಕರು, ಸಹ ಸಂಚಾಲಕರು, ಮಾಧ್ಯಮ ಪ್ರಮುಖರು, ಕಾರ್ಯಾಲಯ ಕಾರ್ಯದರ್ಶಿ, ಕಾನೂನು ಪ್ರಕೋಷ್ಟ, ಕೋಶಾಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಹಾಗೂ ಯುವ ಮೋರ್ಚಾದ ಅಧ್ಯಕ್ಷರು ಪದತ್ಯಾಗ ಮಾಡಿದ್ದಾರೆ.

