ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಫಲಿತಾಂಶ ಶನಿವಾರ ಹೊರಬೀಳಲಿದ್ದು ಕಾಂಗ್ರೆಸ್ ಮತ್ತು ಎನ್ಡಿಎಗೆ ಈ ಫಲಿತಾಂಶ ಪ್ರತಿಷ್ಠೆಯ ವಿಷಯವಾಗಿದೆ. ಉಪ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳು ಮೂರರಲ್ಲಿ ಎರಡು ಕ್ಷೇತ್ರಗಳನ್ನು ಎನ್ಡಿಎ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ.
ಪಂಚ ಗ್ಯಾರಂಟಿಗಳಿಗಾಗಿ ಸರ್ಕಾರದ ಬೊಕ್ಕಸ ಖಾಲಿ ಮಾಡಿದ್ದಾರೆ ಎಂದು ಸ್ವಪಕ್ಷದ ಶಾಸಕರ ಕೆಂಗಣ್ಣಿಗೆ ಗುರಿಯಾಗಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈ ಫಲಿತಾಂಶ ಮಹತ್ವದ್ದಾಗಿದೆ.
ಈ ಮೂರು ಕ್ಷೇತ್ರಗಳಲ್ಲಿ ಕನಿಷ್ಠ ಎರಡು ಸೋತರೂ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಮುಳುವಾಗಲಿದೆ. ಈಗಾಗಲೇ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ವಕ್ಸ್ ಮಂಡಳಿಯಿಂದ ಅಕ್ರಮ ವಾಗಿ ಜಾಗ ಒತ್ತುವರಿ ಸೇರಿ ಹಲವು ಆರೋಪ ಹೊತ್ತಿರುವ ಕಾಂಗ್ರೆಸ್ಗೆ ಈ ಕ್ಷೇತ್ರಗಳಲ್ಲಿ ಗೆಲುವು ಪಡೆಯುವಲ್ಲಿ ಹಿನ್ನಡೆ ತರಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಓಡಾಡುತ್ತಿವೆ